ಧೀಮತಿ ಜೈನ ಮಹಿಳಾ ಸಮಾಜ, ಉಜಿರೆ

ಧೀಮತಿ ಜೈನ ಮಹಿಳಾ ಸಮಾಜ, ಉಜಿರೆ

prayer thumb

ಧೀಮತಿ ಜೈನ ಮಹಿಳಾ ಸಮಾಜ, ಉಜಿರೆ 

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಧೀಮತಿ ಜೈನ ಮಹಿಳಾ ಸಮಾಜದ ಸಹಕಾರ 

ದಿನಾಂಕ 14-11-2026 ರಂದು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಇಂದ್ರಪ್ರಸ್ಥ ಕ್ರೀಡಾಂಗಣದಲ್ಲಿ ಕಾರ್ಕಳದ ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ ಪ್ರಯುಕ್ತ ಅಲ್ಲಿನ ಅವಿಭಜಿತ ದಕ್ಷಿಣ ಕನ್ನಡದ ಯುವಜನ ಸಂಘದ ವತಿಯಿಂದ ನಮ್ಮ ರಾಜ್ಯದ ಹಾಗೂ ಹೊರ ರಾಜ್ಯದ ಜೈನ ಬಾಂಧವರಿಗಾಗಿ  ರಾಷ್ಟಮಟ್ಟದ ಕಬಡ್ಡಿ ಪಂದ್ಯಾಟವನ್ನು ಆಯೋಜಿಸಲಾಗಿತ್ತು.

ಉಜಿರೆಯಲ್ಲಿ ನಡೆದ ಈ ಕ್ರೀಡಾಕೂಟಕ್ಕೆ ಜೈನ್ ಮಿಲನ್ ಬೆಳ್ತಂಗಡಿ ಹಾಗೂ ಧೀಮತಿ ಜೈನ ಮಹಿಳಾ ಸಮಾಜ, ಉಜಿರೆ ಇವರು ಸಂಪೂರ್ಣ ಸಹಕಾರವನ್ನು ನೀಡಿದರು. 

ಧೀಮತಿ ಜೈನ ಮಹಿಳಾ ಸಮಾಜದ ಅಧ್ಯಕ್ಷರಾದ ಶ್ರೀಮತಿ ಅಶ್ವಿನಿ ಪ್ರವೀಣ್ ಕುಮಾರ್ ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಲ್ಲಿ ಒಬ್ಬರಾಗಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಧೀಮತಿ ಜೈನ ಮಹಿಳಾ ಸಮಾಜದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಅಗತ್ಯವಾದ ಸಹಕಾರವನ್ನು ನೀಡಿದರು. ಸಮಾಜದ ಸದಸ್ಯರ ಸಕ್ರಿಯ ಭಾಗವಹಿಸುವಿಕೆ ಹಾಗೂ ಸಹಕಾರದೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

ಜೈ ಜಿನೇಂದ್ರ 🙏