ಸ್ವಿಟ್ಜರ್‌ಲ್ಯಾಂಡ್‌ನ ಪ್ರತಿಷ್ಠಿತ ಡನ್‌ಸ್ಟರ್ ಬ್ಯುಸಿನೆಸ್ ಸ್ಕೂಲ್  ವತಿಯಿಂದ ಗೌರವ ಡಾಕ್ಟರೇಟ್ ಪಡೆದ ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆ

ಸ್ವಿಟ್ಜರ್‌ಲ್ಯಾಂಡ್‌ನ ಪ್ರತಿಷ್ಠಿತ ಡನ್‌ಸ್ಟರ್ ಬ್ಯುಸಿನೆಸ್ ಸ್ಕೂಲ್  ವತಿಯಿಂದ ಗೌರವ ಡಾಕ್ಟರೇಟ್ ಪಡೆದ ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆ

prayer thumb

ಸ್ವಿಟ್ಜರ್‌ಲ್ಯಾಂಡ್‌ನ ಪ್ರತಿಷ್ಠಿತ ಡನ್‌ಸ್ಟರ್ ಬ್ಯುಸಿನೆಸ್ ಸ್ಕೂಲ್  ವತಿಯಿಂದ ಗೌರವ ಡಾಕ್ಟರೇಟ್ ಪಡೆದ ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮವನ್ನು ಬಾಹುಬಲಿ ಮಹಿಳಾ ಸೇವಾ ಸಮಿತಿಯ ವತಿಯಿಂದ 22-07-2026 ರಂದು ಗೌರವಪೂರ್ವಕವಾಗಿ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯೆಯರು ಉಪಸ್ಥಿತರಿದ್ದು, ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಸಮಾಜಸೇವೆ, ಮಹಿಳಾ ಸಬಲೀಕರಣ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಅಮೋಘ ಸೇವೆಯನ್ನು ಸ್ಮರಿಸಿ ಅವರನ್ನು ಅಭಿನಂದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಅವರ ಸಾಧನೆಗಳು ಸಮಾಜಕ್ಕೆ ಸ್ಫೂರ್ತಿದಾಯಕವಾಗಿದ್ದು, ಇಂತಹ ಗೌರವವು ನಮ್ಮ ನಾಡಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಯಿತು.